ಬೆಂಗಳೂರು : ಮರಗಳಿಗೆ ಮೊಳೆ ಹೊಡೆಯುವುದು, ಸ್ಟ್ಯಾಪ್ಲರ್ ಪಿನ್ ಹೊಡೆಯುವುದು ಶಿಕ್ಷಾರ್ಹ ಅಪರಾಧ.
ಈ ಸಂಬಂಧ ಕಾನೂನಿಗೆ ತಿದ್ದುಪಡಿ ತಂದು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಲು ಕ್ರಮವಹಿಸುವುದಾಗಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ.
ನಗರದ ಚಿತ್ರಕಲಾ ಪರಿಷತ್ತು ಬಸ್ ನಿಲ್ದಾಣ ಹತ್ತಿರ ಬಿ.ಪ್ಯಾಕ್ ಸಂಸ್ಥೆ ಹಮ್ಮಿಕೊಂಡಿರುವ ‘ಮೊಳೆ ಮುಕ್ತ ಮರ ಬೆಂಗಳೂರು’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರಗಳ ಮೇಲೆ ಭಿತ್ತಿಪತ್ರಗಳು ಅಂಟಿಸುವುದು, ಮೊಳೆ ಹೊಡೆಯುವುದನ್ನು ನಿಷೇಧಿಸಿದ್ದರೂ ಮರಗಳ ಮೇಲೆ ಭಿತ್ತಿಪತ್ರಗಳನ್ನು ಅಂಟಿಸುತ್ತಿದ್ದಾರೆ.
ಅಂತವರ ಮೇಲೆ ಕ್ರಿಮಿನಲ್ ಕೇಸ್ ಹಾಕಲು ಕ್ರಮಕೈಗೊಳ್ಳಲಾಗುತ್ತಿದೆ. ಜೊತೆಗೆ ಕಾನೂನು ತಿದ್ದುಪಡಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
PublicNext
10/12/2020 08:14 am