ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರಿಗೆ ನೌಕರರ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ಕೆಎಸ್ ಆರ್ ಟಿ ಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ ಗಳು ರಸ್ತೆಗೆ ಇಳಿಯದ ಕಾರಣ ಜನ ಪರದಾಡುವಂತಾಗಿದೆ.

ಸಾರಿಗೆ ನೌಕರರನ್ನು ಸರಕಾರಿ ನೌಕರರು ಎಂದು ಪರಿಗಣಿಸಿ ಸೇರಿಂದತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಗುರುವಾರ ಪ್ರತಿಭಟನೆ ನಡೆಸಿ ಇಂದು ಮುಷ್ಕರ ಹೂಡಿದ್ದಾರೆ.

ಪರಿಣಾಮ ರಾಜ್ಯದ ನಾಲ್ಕು ನಿಗಮಗಳ ಬಸ್ ಗಳು ಸಂಚರಿಸದೇ ಬಸ್ ನಿಲ್ದಾಣಗಳಲ್ಲೇ ಉಳಿದಿದ್ದು, ಪ್ರಯಾಣಿಕರು ಪರದಾಟ ಪಡುವಂತಾಗಿದೆ.

ಗುರುವಾರ ಸಾವಿರಾರು ಸಂಖ್ಯೆಯಲ್ಲಿ ನೌಕರರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದರು. ಆದರೆ ಅವರನ್ನು ಅರ್ಧದಲ್ಲೇ ತಡೆದ ಪೊಲೀಸರು ಹಲವರನ್ನು ವಶಕ್ಕೆ ಪಡೆದರು. ಈ ನಡೆಯನ್ನು ಖಂಡಿಸಿ ಇಂದು ಮುಷ್ಕರಕ್ಕೆ ಕರೆ ನೀಡಲಾಗಿದೆ.

ಬಸ್ ಬಂದ್ ಬಗ್ಗೆ ಯಾವುದೇ ಮಾಹಿತಿ ಇಲ್ಲದೆ ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಪರದಾಡುವಂತಾಗಿದೆ.

Edited By : Nirmala Aralikatti
PublicNext

PublicNext

11/12/2020 07:50 am

Cinque Terre

82.28 K

Cinque Terre

2

ಸಂಬಂಧಿತ ಸುದ್ದಿ