ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಅನ್ನದಾತರ ಪ್ರತಿಭಟನೆ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ, ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್.
ಹೀಗೆ ದೇಶ ಮತ್ತು ರಾಜ್ಯದಲ್ಲಿ ಬಂದ್ ಕಾವು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನಸಾಮಾನ್ಯರ ಪಾಡು ಹೇಳತೀರದಂತ್ತಾಗಿದೆ.
ಕೊರಾನಾದಿಂದ ಕಂಗಾಲಾದ ಜನ ಈಗಷ್ಟೇ ಸಹಜ ಸ್ಥಿತಿಗೆ ಮರಳುತ್ತಿರುವ ಬೆನ್ನಲ್ಲೆ ಈ ಬಂದ್ ಗಳಿಂದಾಗಿ ಪರದಾಡುವಂತಾಗಿದೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರು ಇಂದು ಮುಷ್ಕರ ಹೂಡಿದ್ದಾರೆ.
ಹೀಗೆ ಹಠಾತ್ ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಂದ ಬಸ್ ಸಂಚಾರವಿಲ್ಲದೆ ಎಂದಿನಂತೆ ಮನೆಯಿಂದ ಹೋರಟ ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಇನ್ನೂ ರೈತರ ಪ್ರತಿಭಟನೆಗೆ ಕವಡೆ ಕಾಸಿನ ಕಿಮ್ಮತ್ತು ಕೊಡದ ಸರ್ಕಾರಕ್ಕೆ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರೈಲ್ವೆ ಹಳಿಗಳನ್ನು ಬಂದ್ ಮಾಡುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಒಟ್ಟಿನಲ್ಲಿ ದೇಶದಲ್ಲಿಯ ಈ ಅಲ್ಲೋಲ್ಲ ಕಲ್ಲೋಲಗಳಿಗೆ ಸರ್ಕಾರ ಬಹುಬೇಗ ತೆರೆ ಎಳೆಯಬೇಕಿದೆ.
PublicNext
11/12/2020 09:36 am