ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.
ಅಲ್ಲದೇ ಪ್ರತಿ ಜಿಲ್ಲೆಗಳಲ್ಲೂ ಹೋರಾಟ ನಡೆಯಲಿದ್ದು, ಆಯಾ ಜಿಲ್ಲೆಗಳಲ್ಲಿ ಡಿಪೋಗಳ ಎದುರು ಸಾರಿಗೆ ಸಂಸ್ಥೆಯ ಸಿಬ್ಬಂದಿ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ.
ಹಾಗಾಗಿ ಇಂದು ಕೂಡ ಬಸ್ ಬಂದ್ ಆಗಲಿವೆ ಕೆ ಎಸ್ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಗಳು ರಸ್ತೆಗಿಳಿಯುವುದಿಲ್ಲ.
ಇನ್ನು ಯೂನಿಯನ್ ನಾಯಕರ ಜೊತೆಗೆ ಸಾರಿಗೆ ಸಚಿವರು ಇಂದು ಸಭೆ ನಡೆಸಲಿದ್ದಾರೆ.
ಈಗಾಗಲೇ ಮುಷ್ಕರ ಹಿಂಪಡೆಯಲು ಮಾಡಿದ ಮನವಿಗೆ ಸಿಬ್ಬಂದಿ ಒಪ್ಪಿಲ್ಲ. ಇತ್ತ ಬಸ್ ಗಳಿಲ್ಲದೇ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
PublicNext
13/12/2020 07:39 am