ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಸಂಸತ್ ಮೇಲೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಭೀಕರ ದಾಳಿ ನಡೆಸಿ ಇಂದಿಗೆ 19 ವರ್ಷ.
ಡಿಸೆಂಬರ್ 13, 2001ರಂದು ಸಂಸತ್ ಮೇಲೆ ದಾಳಿ ನಡೆಸಿದ್ದರು.
ದಾಳಿಯಲ್ಲಿ ಆರು ಪೊಲೀಸರು ಸೇರಿದಂತೆ ಒಟ್ಟು 79 ಮಂದಿ ಭಯೋತ್ಪಾಕರ ಕೌರ್ಯಕ್ಕೆ ಬಲಿಯಾಗಿ, 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ದಾಳಿಯಲ್ಲಿ ಐವರು ಉಗ್ರರನ್ನು ನಮ್ಮ ವೀರ ಯೋಧರು ಹೊಡೆದುರುಳಿಸುವಲ್ಲಿ ಸಫಲರಾಗಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 2001 ರಲ್ಲಿ ಈ ದಿನ ನಮ್ಮ ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವು ಎಂದಿಗೂ ಮರೆಯುವುದಿಲ್ಲ.
ನಮ್ಮ ಸಂಸತ್ತನ್ನು ರಕ್ಷಿಸುವ ಸಲುವಾಗಿ ಪ್ರಾಣ ಕಳೆದುಕೊಂಡವರ ಶೌರ್ಯ ಮತ್ತು ತ್ಯಾಗವನ್ನು ನಾವು ನೆನೆಯುತ್ತಿದ್ದೇವೆ.
ವೀರ ಯೋಧರಿಗೆ ನಾವೆಂದಿಗೂ ಕೃತಜ್ಞರಾಗಿರಬೇಕೆಂದು ಹೇಳಿದ್ದಾರೆ.
PublicNext
13/12/2020 09:24 am