ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಯಾಣಿಕರ ಗಮನಕ್ಕೆ: ಯೂಟರ್ನ್ ಹೊಡೆದ ಸಾರಿಗೆ ನೌಕರರು- ರಸ್ತೆಗೆ ಇಳಿಯಲ್ಲ ಬಸ್‌ಗಳು

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಲ್ಲಿ ಹೈಡ್ರಾಮಾ ನಡೆದಿದ್ದು, ಸರ್ಕಾರದ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಬಸ್‌ಗಳನ್ನು ಓಡಿಸದೇ ಇರಲು ನೌಕರರು ತೀರ್ಮಾನ ತೆಗೆದುಕೊಂಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯ ಬಳಿಕ ಸಾರಿಗೆ ನೌಕರರ ಸಂಘದವರು ಮುಷ್ಕರವನ್ನು ಕೈ ಬಿಡುವುದಾಗಿ ತಿಳಿಸಿದ್ದರು. ಆದರೆ ಫ್ರೀಡಂ ಪಾರ್ಕ್‌ಗೆ ತೆರಳಿದ ಬಳಿಕ ನಿರ್ಧಾರವನ್ನು ಬದಲಾಯಿಸಿ ಪ್ರತಿಭಟನೆ ಮುಂದುವರಿಸಲು ತೀರ್ಮಾನ ತೆಗೆದುಕೊಂಡಿದ್ದಾರೆ.

ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಬೇಡಿಕೆಯನ್ನು ಸರ್ಕಾರ ಕೈಬಿಟ್ಟು, 8 ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ನೀಡಿತ್ತು. ಹೀಗಾಗಿ ನೌಕರರು ಸಂಘದ ನಾಯಕರು ಮುಷ್ಕರವನ್ನು ಅಂತ್ಯಗೊಳಿಸುವ ತೀರ್ಮಾನವನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಸ್‌ ಸೇವೆ ಆರಂಭಿಸಲು ಸಿದ್ಧತೆ ನಡೆಸಿದ್ದರು. ಅಷ್ಟೇ ಅಲ್ಲದೇ ಜಿಲ್ಲಾ ಕೇಂದ್ರಗಳತ್ತ ಕೆಲ ಬಸ್‌ಗಳ ಸಂಚಾರ ಆರಂಭವಾಗಿತ್ತು.

ಇತ್ತ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಬಸ್‌ ನಿಲ್ದಾಣದತ್ತ ಪ್ರಯಾಣಿಕರು ಬರುತ್ತಿದ್ದಾರೆ. ದಿಢೀರ್‌ ತಮ್ಮ ನಿರ್ಧಾರವನ್ನು ಸಾರಿಗೆ ನೌಕರರ ಸಂಘ ಬದಲಿಸಿದ್ದರಿಂದ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಈಗ ಪರದಾಡುವಂತಾಗಿದೆ.

Edited By : Vijay Kumar
PublicNext

PublicNext

13/12/2020 08:59 pm

Cinque Terre

124.88 K

Cinque Terre

22

ಸಂಬಂಧಿತ ಸುದ್ದಿ