ನವದೆಹಲಿ: ಪ್ರತಿ ತಿಂಗಳಿಗೊಮ್ಮೆ ಪರಿಷ್ಕರಣೆಯಾಗುತ್ತಿದ್ದ ಎಲ್‌ಪಿಜಿ ದರ ಪ್ರತಿ ವಾರವೂ ಪರಿಷ್ಕರಣೆಯಾಗುವ ಸಾಧ್ಯತೆ ಇದೆ.
ಮುಂದಿನ ವರ್ಷದಿಂದ ಪ್ರತಿವಾರ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆ ಮಾಡಲು ತೈಲ ಕಂಪೆನಿಗಳು ನಿರ್ಧರಿಸಿವೆ. ಪೆಟ್ರೋಲ್, ಡಿಸೇಲ್ ಬೆಲೆಯನ್ನು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪರಿಷ್ಕರಣೆ ಮಾಡಲಾಗುತ್ತದೆ. ಆಯಾ ದಿನದ ಆರು ಗಂಟೆ ಬಳಿಕ ಪರಿಷ್ಕರಣೆಯಾಗುವ ದರವನ್ನು ಗ್ರಾಹಕರು ನೀಡಬೇಕಿದೆ. ಸದ್ಯ ಪ್ರತಿ ತಿಂಗಳು ಎಲ್‌ಪಿಜಿ ದರ ಪರಿಷ್ಕರಣೆ ಆಗುತ್ತಿದೆ. ಪ್ರತಿ ತಿಂಗಳು ದರ ಪರಿಷ್ಕರಣೆ ಆಗುತ್ತಿರುವುದು ತೈಲ ಕಂಪನಿಗಳಿಗೆ ಸಮಸ್ಯೆ ಆಗುತ್ತಿರುವ ಕಾರಣ ಈಗ ವಾರಕ್ಕೊಮ್ಮೆ ದರ ಪರಿಷ್ಕರಣೆ ಬಯಸಿವೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಇಲ್ಲಿಯವರೆಗೆ ಅಧಿಕೃತ ಹೇಳಿಕೆ ಪ್ರಕಟಿಸಿಲ್ಲ.
PublicNext
23/12/2020 03:24 pm