ನವದೆಹಲಿ: ದೆಹಲಿ ಸರ್ಕಾರ ಬುಧವಾರ ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್)ಯನ್ನು ಶೇಕಡಾ 30ರಿಂದ 19.40ಕ್ಕೆ ಇಳಿಕೆ ಮಾಡಿದೆ. ವ್ಯಾಟ್ ಇಳಿಕೆಯಿಂದಾಗಿ ಪೆಟ್ರೋಲ್ ದರ ಲೀಟರ್‌ಗೆ ₹8 ಕಡಿಮೆಯಾಗಿದೆ. ಬುಧವಾರ ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಕಳೆದ 27 ದಿನಗಳಿಂದ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ನವೆಂಬರ್ 4ರಂದು ಕೇಂದ್ರ ಸರ್ಕಾರ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು. ಇದರಿಂದಾಗಿ ದರ ಕಡಿಮೆಯಾಗಿತ್ತು. ದೆಹಲಿಯಲ್ಲಿ ಈಗ ಪೆಟ್ರೋಲ್ ದರ ಲೀಟರ್‌ಗೆ 103.97 ರೂ. ಮತ್ತು ಡೀಸೆಲ್ ಬೆಲೆ 86.67 ರೂ. ಇದೆ.
PublicNext
01/12/2021 03:23 pm