ಬೆಂಗಳೂರು: ಕೈಗಾರಿಕಾ ಸೌಲಭ್ಯ ಕಾಯ್ದೆಯ ತಿದ್ದುಪಡಿ ಮತ್ತು ಹೊಸ ಕೈಗಾರಿಕಾ ನೀತಿಯ ಘೋಷಣೆ ಹಾಗೂ ಅಫಿಡವಿಟ್ ಆಧಾರಿತ ಕ್ಲಿಯರೆನ್ಸ್ (ಎಬಿಸಿ) ಯೋಜನೆಯ ಅನುಷ್ಠಾನದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಸುಲಭವಾಗಿಸಿದೆ. ಇವೆಲ್ಲ ಕ್ರಮಗಳ ಅನುಷ್ಠಾನದಿಂದಾಗಿ ಕರ್ನಾಟಕ ರಾಜ್ಯ 'ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್' ಅನುಷ್ಠಾನದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮುಂಚೂಣಿಯಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಶ್ರೀ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಸೋಚಾಮ್ ಆಯೋಜಿಸಿದ್ದ ನವ ಕರ್ನಾಟಕ ಈಸ್ ಆಫ್ ಡ್ಯೂಯಿಂಗ್ ಬ್ಯುಸಿನೆಸ್ ವೆಬಿನಾರ್‌ನಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಭಾರತ ದೇಶವನ್ನು ಕೈಗಾರಿಕಾ ಮತ್ತು ಬಂಡವಾಳ ಹೂಡಿಕೆ ಸ್ನೇಹಿ ದೇಶವನ್ನಾಗಿಸಿದೆ. ವಿಶ್ವ ಬ್ಯಾಂಕಿನ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಸೂಚ್ಯಂಕದಲ್ಲಿ 2014ನೇ ಸಾಲಿನಲ್ಲಿ 142ನೇ ಸ್ಥಾನದಲ್ಲಿದ್ದ ಭಾರತ ದೇಶ, 2019ರಲ್ಲಿ 63 ನೇ ಸ್ಥಾನ ಪಡೆದುಕೊಂಡಿರುವುದು ಇದಕ್ಕೆ ಸಾಕ್ಷಿ. ಭಾರತದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತಿ ಪಡೆದಿರುವ ಕರ್ನಾಟಕ ರಾಜ್ಯ, ಐಟಿ, ಮಾಹಿತಿ ತಂತ್ರಜ್ಞಾನ ಅವಲಂಬಿತ ಸೇವೆಗಳು, ಮಷಿನ್ ಟೂಲ್ಸ್, ಏರೋಸ್ಪೇಸ್, ಬಯೋಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ ಡಿಸೈನ್ ಕ್ಷೇತ್ರದಲ್ಲಿ ಮುಂಚೂಣಿಯ ಸ್ಥಾನ ಹೊಂದಿದೆ ಸಚಿವ ಶೆಟ್ಟರ್ ಹೇಳಿದ್ದಾರೆ.
PublicNext
23/02/2021 09:00 pm