ದೆಹಲಿ: ದೇಶದಲ್ಲಿ ಗುರುವಾರದಿಂದ (ಅಕ್ಟೋಬರ್ 14) ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿದೆ. ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಲೆ ದಸರಾ ಸಂಭ್ರಮದ ನಡುವೆಯೇ ಹೆಚ್ಚಳವಾಗಿದೆ. ಈ ಮೂಲಕ ಮತ್ತೆ ಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಸದ್ಯ ಪೆಟ್ರೋಲ್ ದರ 31ರಿಂದ 35 ಪೈಸೆ ಏರಿಕೆ ಮಾಡಲಾಗಿದೆ. ಜತೆಗೆ ಲೀಟರ್ ಡೀಸೆಲ್ ದರ 34 ರಿಂದ 37 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿದೆ.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.52 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.75 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.40 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ಕೊಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 105.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.63 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.10 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.93 ರೂಪಾಯಿ ಇದೆ.
PublicNext
14/10/2021 10:13 am