ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸಲು ಅನುದಾನ ಬಿಡುಗಡೆ

ಬೆಂಗಳೂರು: 2022-23 ನೇ ಸಾಲಿನ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಉಚಿತ ಶೂ, ಸಾಕ್ಸ್ ವಿತರಿಸಲು ರಾಜ್ಯ ಸರ್ಕಾರ ಒಟ್ಟು 132 ಕೋಟಿ ರೂ. ಬಿಡುಗಡೆ ಮಾಡಿದೆ.

ವಿದ್ಯಾವಿಕಾಸ ಯೋಜನೆಯಡಿ 2022-23ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ವಿತರಿಸಲು ಅನುಮತಿ ನೀಡಲಾಗಿದ್ದು, ಒಟ್ಟು 132 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶೂ ಮತ್ತು ಸಾಕ್ಸ್‌ಗಳನ್ನು ವಿತರಣೆ ಮಾಡಲು ಸರ್ಕಾರದ ಆದೇಶಗಳನ್ನು ಅನುಸರಿಸಿ 2022-23 ನೇ ಸಾಲಿನಲ್ಲಿ ತಾಲೂಕುವಾರು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ನೇರವಾಗಿ ಕೆ-2 ಮುಖಾಂತರ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಖಾತೆಗೆ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.

Edited By : Nagaraj Tulugeri
PublicNext

PublicNext

26/08/2022 07:32 am

Cinque Terre

49.87 K

Cinque Terre

1