ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೃಹತ್ ಬಂಡವಾಳದಲ್ಲಿ ನಿರ್ಮಾಣವಾಗುತ್ತಿರುವ ಸಂಸತ್ ಭವನಕ್ಕೆ ಇಂದು ಶಿಲಾನ್ಯಾಸ

ನವದೆಹಲಿ : ಬರೋಬ್ಬರಿ 917 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ದೆಹಲಿಯ ರಾಜಪಥದಲ್ಲಿ ಈ ಭವನ ನಿರ್ಮಾಣವಾಗುತ್ತಿದೆ.

ಇಂದಿನ ಸಮಾರಂಭದಲ್ಲಿ ಅನೇಕ ರಾಜಕೀಯ ಪಕ್ಷಗಳ ನಾಯಕರು, ಸಚಿವರು, ವಿವಿಧ ದೇಶಗಳು ರಾಯಭಾರಿಗಳು ಭಾಗವಹಿಸಲಿದ್ದಾರೆ.

ಇಂದು ಮಧ್ಯಾಹ್ನ 12.55ಕ್ಕೆ ಭೂಮಿ ಪೂಜೆ, ಬಳಿಕ ಸಂಸತ್ ಭವನದ ಶಿಲಾನ್ಯಾಸ ನೆರವೇರಲಿದೆ.

64,500 ಚ.ಮೀ. ವಿಸ್ತೀರ್ಣದಲ್ಲಿ ನೂತನ ಸಂಸತ್ ಭವನದ ಕಟ್ಟಡ ನಿರ್ಮಾಣವಾಗಲಿದೆ.

ಈ ಕಟ್ಟಡ ಭೂಕಂಪವನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿದೆ.

ಈ ನೂತನ ಸಂಸತ್ ಭವನದಲ್ಲಿ ಏಕಕಾಲಕ್ಕೆ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಮುಂದೆ ಸಂಸದರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭವಿಷ್ಯದ 100 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಈ ಭವನವನ್ನು ನಿರ್ಮಿಸಲಾಗುತ್ತಿದೆ.

ಆಸನಗಳು 60 ಸೆಂ.ಮೀ. ಅಗಲ ಮತ್ತು 40 ಸೆಂ.ಮೀ. ಎತ್ತರ ಇರಲಿದೆ. ನಾಲ್ಕು ಮಹಡಿಗಳನ್ನು ಹೊಂದಿರಲಿದ್ದು, ಆರು ಪ್ರವೇಶದ್ವಾರಗಳನ್ನು ಹೊಂದಿರಲಿದೆ.

ಜಂಟಿ ಅಧಿವೇಶನ ನಡೆಯುವ ಸಮಯದಲ್ಲಿ ಹೊಸ ಲೋಕಸಭೆಯಲ್ಲಿ 1,224 ಸದಸ್ಯರಿಗೆ ಕೂರಲು ಅವಕಾಶ ಕಲ್ಪಿಸಬಹುದಾಗಿದೆ.

ನೂತನ ಸಂಸತ್ ಭವನದ ಕಟ್ಟಡವನ್ನು ನಿರ್ಮಿಸುವ ಸೆಂಟ್ರಲ್ ವಿಸ್ಟಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಕೆಲವು ದಿನಗಳ ಹಿಂದಷ್ಟೇ ಸುಪ್ರೀಂಕೋರ್ಟ್ ಅನುಮತಿ ನೀಡಿತ್ತು.

ಪ್ರಸ್ತುತ ಇರುವ ಸಂಸತ್ ಭವನಕ್ಕೆ 1921ರಲ್ಲಿ ಶಂಕು ಸ್ಥಾಪನೆ ನೆರವೇರಿಸಿ 83 ಲಕ್ಷ ರೂ. ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಿಸಿ 1927ರ ಜನವರಿ 18ರಂದು ಉದ್ಘಾಟಿಸಲಾಗಿತ್ತು.

Edited By : Nirmala Aralikatti
PublicNext

PublicNext

10/12/2020 10:10 am

Cinque Terre

84.32 K

Cinque Terre

8

ಸಂಬಂಧಿತ ಸುದ್ದಿ