ಬೆಂಗಳೂರು: ಕೊರೋನಾ ಸಂದಿಗ್ಧ ಕಾಲದಲ್ಲಿ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ತುಂಬಾ ಕಷ್ಟವಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನೌಕರರು ಕೂಡಲೇ ತಮ್ಮ ಪ್ರತಿಭಟನೆಯನ್ನು ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದೂ ಅವರು ಮನವಿ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ವಾಸ್ತವ ಪರಿಸ್ಥಿತಿಯನ್ನು ಸಾರಿಗೆ ನೌಕರರು ಅರಿತುಕೊಳ್ಳಬೇಕು. ಈ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನಿಸಲಾಗುತ್ತದೆ ಎಂದರು.
ಮಾರ್ಚ್ ತಿಂಗಳಿನಿಂದ ಕೋವಿಡ್-19 ಪರಿಣಾಮ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷಿತ ಆದಾಯ ಬಂದಿಲ್ಲ. ಆರ್ಥಿಕ ಸಂಕಷ್ಟಗಳ ನಡುವೆಯೂ ನೌಕರರ ಹಿತ ಕಾಪಾಡಿದ್ದೇವೆ. ಈಗ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಲಿದೆ. ಆದರೆ ಏಕಾಏಕಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ಸರ್ಕಾರಕ್ಕೆ ಆರ್ಥಿಕ ಸಂಕಷ್ಟಇರುವಾಗ ಬೇಡಿಕೆಗಳನ್ನು ಈಡೇರಿಸಬೇಕಾದರೆ ಸಮಯವಾಕಾಶ ಬೇಕಾಗುತ್ತದೆ’ ಎಂದು ಮುಖ್ಯಮಂತ್ರಿಗಳು ಹೇಳಿದರು.
PublicNext
12/12/2020 11:49 am