ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ತಾಯ್ನಾಡಿಗೆ ವಾಪಸ್ ಕರೆತರುವ ಕೆಲಸ ಭರದಿಂದ ಸಾಗಿದೆ. ಈಗಾಗಲೇ ನೂರಾರು ವಿದ್ಯಾರ್ಥಿಗಳು ರಾಜ್ಯಕ್ಕೆ ವಾಪಸ್ ಬಂದಿದ್ದಾರೆ. ಹೀಗೆ ವಾಪಸ್ ಬಂದ ಎಲ್ಲ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನ ನಿಲ್ದಾಣದಿಂದ ತಮ್ಮ ಊರುಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದೆ.
ರಾಜ್ಯದ ಎಲ್ಲ ವಿಮಾನ ನಿಲ್ದಾಣದೊಳಗಿನ ನೋಡಲ್ ಅಧಿಕಾರಿಗಳು ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
PublicNext
01/03/2022 07:41 am