ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: 'ನಾಗಮೋಹನ್ ದಾಸ್ ವರದಿ ಜಾರಿಗೊಳಿಸಿ, ಇಲ್ಲ ಪರಿಣಾಮ ಎದುರಿಸಿ'

ದಾವಣಗೆರೆ: ನಾಗಮೋಹನ್ ದಾಸ್ ವರದಿ ಜಾರಿಗೆ ತನ್ನಿ ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಸ್‌ಸಿ, ಎಸ್‌ಟಿ ಸ್ವಾಭಿಮಾನಿ ಒಕ್ಕೂಟ, ಜಿಲ್ಲಾ ನಾಯಕ ಸಮಾಜ ಸೇರಿದಂತೆ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ವೃತ್ತದಲ್ಲಿ ಈ ಹೋರಾಟಕ್ಕೆ ಚಾಲನೆ ನೀಡಲಾಯಿತು‌. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಅಲ್ಲಿ‌ ಜಮಾವಣೆಗೊಂಡು ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅನ್ವಯ ಆಗುವಂತೆ ಶೇ.7.5 ಮೀಸಲಾತಿ ಒದಗಿಸುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ವರದಿ ಜಾರಿಯನ್ನ ಕೂಡಲೇ‌ ಮಾಡಬೇಕು. ಕೇವಲ ಭರವಸೆ‌ ನೀಡುವುದನ್ನು ಬಿಟ್ಟು ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಿ ಎಂದು ಎಚ್ಚರಿಕೆ ನೀಡಿದರು.

Edited By :
PublicNext

PublicNext

11/07/2022 06:52 pm

Cinque Terre

43.35 K

Cinque Terre

0

ಸಂಬಂಧಿತ ಸುದ್ದಿ