ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಜಟ್ಟಿ ಅಗ್ರಹಾರ ದೊಡ್ಡ ಕೆರೆ ಬಿರುಕು ..! ಜನ- ಜಾನುವಾರುಗಳಿಗೆ ಕಾದಿದೆ ಕಂಟಕ

ಕೊರಟಗೆರೆ: ತಾಲೂಕಿನ ಜಟ್ಟಿ ಅಗ್ರಹಾರದ ಕೆರೆ ಏರಿ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಜಟ್ಟಿ ಅಗ್ರಹಾರ, ಜಂಪೇನಹಳ್ಳಿ ಸೇರಿದಂತೆ ಕೊರಟಗೆರೆ ಪಟ್ಟಣದ ಜನತೆಗೆ ಭಾರೀ ಗಂಡಾಂತರ ಎದುರಾಗಿದೆ.

ಕೆರೆ ಅಚ್ಚುಕಟ್ಟು ಪ್ರದೇಶದ ಭಾಗದ ರೈತರಿಗೆ ಸೇರಿದ ತೋಟಗಳೆಲ್ಲ ಸಂಪೂರ್ಣ ನಾಶವಾಗುವ ಭೀತಿಯಲ್ಲಿ ಜನ ಗಾಬರಿಗೊಂಡಿದ್ದಾರೆ. ಕೊರಟಗೆರೆ ಪಟ್ಟಣದ ಶೇ.90 ಭಾಗದಷ್ಟು ಜನರಿಗೆ ಕುಡಿಯುವ ನೀರಿನ ಮೂಲ ಜಟ್ಟಿ ಅಗ್ರಹಾರದ ಕೆರೆ ಆಗಿದೆ. ಆದರೆ ಈ ಕೆರೆ ಏರಿ ಬಿರುಕು ಮೂಡಿರುವುದು ಜನರಲ್ಲಿ ಆತಂಕ ಮನೆಮಾಡಿದೆ. ಕೆರೆಗಳ ಜವಾಬ್ದಾರಿ ಹೊತ್ತಿರುವ ಮೈನರ್ ಇರಿಗೇಶನ್ ಇಂಜಿನಿಯರ್ ಗಳ ನಿರ್ಲಕ್ಷತನ ಇದಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆರೆ ಏರಿ ಬಿರುಕು ಸುತ್ತಲೂ ಬೆಳೆದಿರುವ ದಟ್ಟ ಗಿಡಮರಗಳ ಬೇರುಗಳಿಂದ ಕೆರೆಯ ಏರಿ ಬಿರುಕು ಬಿಟ್ಟಿದೆ.

ಇನ್ನು ಇದನ್ನೇಲ್ಲಾ ಕಂಡೂ ಕಾಣದಂತೆ ಇರುವ ಎಂಜಿನಿಯರ್ ಗಳ ನಿರ್ಲಕ್ಷ್ಯತನ ಎಷ್ಟರ ಮಟ್ಟಿಗೆ ಸರಿ ಎಂದು ಸ್ಥಳೀಯ ಜನರು ಹಾಗೂ ರೈತರು ಆಕ್ರೋಶ ಭರಿತರಾಗಿದ್ದಾರೆ.

ಎಷ್ಟು ಬಾರಿ ಸ್ಥಳೀಯರು ಅಧಿಕಾರಿಗಳಿಗೆ ದೂರು ಕೊಟ್ಟರು ಕೆರೆ ಬಗ್ಗೆ ತಲೆಕೆಡಿಸಿಕೊಳ್ಳದ ಪರಿಣಾಮ ಇಂದು ಕೆರೆಯ ಏರಿ ಬಿರುಕು ಬಿಟ್ಟು ಸಮಸ್ಯೆಗೆ ಕಾರಣವಾಗಿದೆ. ಇನ್ನೂ ಇಂಜಿನಿಯರ್ ಗಳು ಯಾವುದೇ ಅಧಿಕಾರಿಗಳ ಮಾತಿಗೂ ಬೆಲೆಕೊಡದೆ, ಸ್ಥಳೀಯರ ಮನವಿಗೂ ಮಣಿಯದೇ ಇರುವುದೇ ಈ ಸಂಕಷ್ಟಕ್ಕೆ ಕಾರಣವಾಗಿದೆ.

ಇನ್ನು ಈ ಕೆರೆ ಏರಿ ಒಡೆದರೆ 4 ರಿಂದ 5 ಗ್ರಾಮಗಳು ಸೇರಿದಂತೆ ಜನ ಜಾನುವಾರುಗಳು ಸಂಪೂರ್ಣ ತೀರಾ ತೊಂದರೆಯಾಗುತ್ತದೆ. ಇದಕ್ಕೆಲ್ಲ ನೇರ ಹೊಣೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರಳೇ ಆಗಿದ್ದಾರೆ.

ಸಮಸ್ಯೆಯನ್ನು ಅರಿತ ತಹಶೀಲ್ದಾರ್ ನಹೀದಾ ಜಮ್ ಜಮ್ ಸ್ಥಳಕ್ಕೆ ಭೇಟಿ ಕೊಟ್ಟು ವರದಿ ಸಲ್ಲಿಸಿದರೂ ಸ್ಥಳಕ್ಕೆ ಇಂಜಿನಿಯರ್ ಗಳು ಬರದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ವರದಿ : ರಾಘವೇಂದ್ರ ದಾಸರಹಳ್ಳಿ

Edited By :
PublicNext

PublicNext

20/07/2022 12:22 pm

Cinque Terre

24.83 K

Cinque Terre

0

ಸಂಬಂಧಿತ ಸುದ್ದಿ