ಕೋಲಾರ: ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಒತ್ತಾಯಿಸಿ ಕೋಲಾರ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಬೇಡ ಜಂಗಮ ಮಹಾ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಸಲಾಯ್ತು. ನಾಗಲಾಪುರ ಮಠದ ಶ್ರೀ ಶ್ರೀ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿ ಹಾಗೂ ಬೆಳ್ಳಾಗಿ ಮಠದ ಮಹಾಂತೇಶ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.
ಕೋಲಾರ ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಮಾತನಾಡಿದ ಸ್ವಾಮೀಜಿ, ರಾಜ್ಯ ಸರ್ಕಾರ ಸೂರ್ಯ ಕಾಮತ್ ವರದಿ ಪ್ರಕಾರ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನು ವಿತರಿಸಬೇಕು. ಇಲ್ಲವಾದಲ್ಲಿ ರಾಜ್ಯಮಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
PublicNext
21/07/2022 03:02 pm