ನವದೆಹಲಿ: ಮಂಗಳೂರು ಸೇರಿದಂತೆ ದೇಶದ ಒಟ್ಟು ಆರು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಅದಾನಿ ಗ್ರೂಪ್‌ಗೆ ವಹಿಸಿದ್ದಕ್ಕೆ ಕೇಂದ್ರ ಹಣಕಾಸು ಇಲಾಖೆ ಹಾಗೂ ನೀತಿ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.
ಅಹಮದಾಬಾದ್, ಲಖನೌ, ಮಂಗಳೂರು, ಜೈಪುರ, ಗುವಾಗಟಿ ಹಾಗೂ ತಿರುವನಂತಪುರಂ ವಿಮಾನ ನಿಲ್ದಾಣ ನಿರ್ವಹಣೆಯನ್ನು ಅದಾನಿ ಗ್ರೂಪ್‌ಗೆ ವಹಿಸಲಾಗಿತ್ತು. ಬಿಡ್ ಮುಖಾಂತರ ನಿರ್ವಾಹಕರನ್ನು ಸರ್ಕಾರ ಆಹ್ವಾನಿಸಿತ್ತು. ಸುಮಾರು ಕಂಪನಿಗಳು ಬಿಡ್ ಸಲ್ಲಿಸಿದ್ದರೂ, ಕಡಿಮೆ ಮೊತ್ತದ ಬಿಡ್ ಸಲ್ಲಿಕೆ ಮಾಡಿದ್ದ ಗುಜರಾತ್ ಮೂಲದ ಅದಾನಿ ಗ್ರೂಪ್‌ಗೆ ಬಿಡ್ ಸಿಕ್ಕಿತ್ತು. ಇದಕ್ಕೆ ಆಕ್ಷೇಪಣೆ ವ್ಯಕ್ತ ಪಡಿಸಿರುವ ಕೇಂದ್ರ ಹಣಕಾಸು ಇಲಾಖೆ, ಒಂದು ಬಿಡ್ಡಿಂಗ್ ಕಂಪನಿಗೆ ಎರಡಕ್ಕಿಂತ ಹೆಚ್ಚು ವಿಮಾನ ನಿಲ್ದಾಣಗಳನ್ನು ನೀಡಬಾರದು ಎಂಬ ನಿಯಮವಿದೆ. ಆದರೆ ಇದನ್ನು ಪಾಲಿಸಲಾಗಿಲ್ಲ ಎಂದು ಹೇಳಿದೆ ಎನ್ನಲಾಗಿದೆ.
PublicNext
18/01/2021 03:53 pm