ಬಳ್ಳಾರಿ: ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳವಾಗಿದ್ದರೂ, ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ನಗರದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿಗೆ ನಿನ್ನೆ (ಶನಿವಾರ) ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, "ಬಸ್ ದರ ಹೆಚ್ಚಿಸಿದರೆ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಇದರ ಬದಲಾಗಿ ಎಲೆಕ್ಟ್ರಿಕಲ್ ಬಸ್‌ಗಳನ್ನು ಓಡಿಸಲು ಯೋಜನೆ ರೂಪಿಸಲಾಗಿದ್ದು, ಟೆಂಡರ್ ಕೂಡ ಕರೆಯಲಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಗಾಗಿ ಪ್ರತ್ಯೇಕವಾಗಿ ಅನುದಾನ ನೀಡುವ ವಿಶ್ವಾಸವಿದೆ ಎಂದರು.
ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ತೀವ್ರ ನಷ್ಟದಲ್ಲಿವೆ. ಪ್ರಸಕ್ತ ಸಾಲಿನಲ್ಲಿ ₹ 510 ಕೋಟಿ ನಷ್ಟವಾಗಿದೆ. ಕಳೆದ ವರ್ಷ ₹ 1280 ಕೋಟಿ ನಷ್ಟವಾಗಿದೆ. ನಷ್ಟದಲ್ಲಿರುವ ನಿಗಮಗಳನ್ನು ಲಾಭದತ್ತ ಕೊಂಡೊಯ್ಯುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಸಂಸ್ಥೆಯನ್ನು ನಷ್ಟದಿಂದ ಹೊರ ತರಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಹಳೇ ಬಸ್‌ಗಳನ್ನು ಗುಜುರಿಗೆ ಬಿಸಾಡುವ ಕೇಂದ್ರ ಸರ್ಕಾರದ ನೀತಿ ಚೆನ್ನಾಗಿದೆ. ಮೋದಿಯವರ ಸೂಚನೆಯಂತೆ ಅನುಷ್ಠಾನ ಮಾಡಲಾಗುವುದು ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು.
PublicNext
15/08/2021 08:01 am