ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್ ದರವು ಬುಧವಾರ ಮತ್ತೆ ಏರಿಕೆಯಾಗಿದೆ. ಈಗ ಎಲ್‌ಪಿಜಿ ದರ 15 ರೂಪಾಯಿ ಹೆಚ್ಚಳವಾಗಿದ್ದು, ಈ ಮೂಲಕ ಕಳೆದ ಎರಡು ತಿಂಗಳಿನಲ್ಲಿ ಸತತ ನಾಲ್ಕನೇ ಬಾರಿ ದರ ಹೆಚ್ಚಳ ಮಾಡಿದಂತಾಗಿದೆ. ಇದರಿಂದಾಗಿ ಪ್ರತಿ ಸಿಲಿಂಡರ್ ಬೆಲೆ 900 ರೂ. ಸಮೀಪಿಸಿದೆ.
ಸರ್ಕಾರಿ ತೈಲ ಕಂಪನಿಗಳು ದೇಶೀಯ ಅನಿಲದ ಬೆಲೆಯನ್ನು ಮತ್ತೆ ಹೆಚ್ಚಿಸಿದ್ದು, ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ನವದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ದರ 899.50 ರೂಪಾಯಿಗೆ ಏರಿಕೆಯಾಗಿದೆ. 5 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 502 ರೂ. ಆಗಿದ್ದು, ಇವತ್ತಿನಿಂದಲೇ ಹೊಸ ದರ ಅನ್ವಯವಾಗಿದೆ.
PublicNext
06/10/2021 12:16 pm