ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ವೇತನ ಪಾವತಿಗೆ ಅನುದಾನ ರಿಲೀಸ್

ಬೆಂಗಳೂರು: ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನಲೆ ರಾಜ್ಯದ ಎಲ್ಲ ಸಾರಿಗೆ ನಿಗಮಗಳು ನಷ್ಟದಲ್ಲಿದ್ದವು‌. ಸದ್ಯದ ಮಟ್ಟಿಗೆ ಚೇತರಿಕೆ ಕಾಣುತ್ತಿವೆ. ಈ ನಡುವೆ ಸರ್ಕಾರ ಸಾರಿಗೆ ನೌಕರರಿಗೆ ಹಬ್ಬಕ್ಕೆ ಸಿಹಿಸುದ್ದಿ ನೀಡಿದೆ‌. ಆಗಸ್ಟ್ 2021ರ ಮಾಹೆಯ ವೇತನ ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಸತ್ಯವತಿ ನಡವಳಿಗಳನ್ನು ಹೊರಡಿಸಿದ್ದಾರೆ‌. ನಾಲ್ಕು ಸಾರಿಗೆ ಸಂಸ್ಥೆಗಳ ಅಧಿಕಾರಿ ಸಿಬ್ಬಂದಿಗಳ ಏಪ್ರಿಲ್, ಮೇ, ಜೂನ್ ಮತ್ತು ಜುಲೈ 2021ರ ಮಾಹೆಯ ವೇತನ ವೆಚ್ಚಕ್ಕಾಗಿ ಬಳಸಿಕೊಳ್ಳಲು ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿತ್ತು.

Edited By : Nagaraj Tulugeri
PublicNext

PublicNext

14/10/2021 09:17 am

Cinque Terre

33.94 K

Cinque Terre

1

ಸಂಬಂಧಿತ ಸುದ್ದಿ