ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಾರಿಗೆ ನಿಗಮಗಳ ಪರಿಸ್ಥಿತಿ ಸರಿದೂಗಿಸಲು ಸಮಿತಿ ರಚನೆ

ವರದಿ: ಗಣೇಶ್ ಹೆಗಡೆ

ಬೆಂಗಳೂರು: ಸಾರಿಗೆ ನಿಗಮಗಳ ಆರ್ಥಿಕ ಅಭಿವೃದ್ಧಿ ಹಾಗೂ ನಷ್ಟವನ್ನು ಸರಿದೂಗಿಸಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ.

ಲಾಕ್‌ಡೌನ್ ತೆರವಾದ ಬಳಿಕ ಬಸ್‌ಗಳ ಓಡಾಟದ ನಂತರವೂ ಆರ್ಥಿಕ ಸ್ಥಿತಿ ಹೇಳಿಕೊಳ್ಳುವಂತಿಲ್ಲ. ಹೀಗಾಗಿ, ಸಾರಿಗೆ ನಿಗಮಗಳನ್ನು ನಷ್ಟದಿಂದ ಪಾರು ಮಾಡಲು ಸರ್ಕಾರ ಸಮಿತಿಯ ಮೊರೆ ಹೋಗಿದೆ.

ಮುಖ್ಯಮಂತ್ರಿಗಳ ನಿರ್ದೇಶನ ಮೇರೆಗೆ ಎಂ.ಆರ್. ಶ್ರೀನಿವಾಸ ಮೂರ್ತಿಯವರ (ನಿವೃತ್ತ ಐಎಎಸ್) ಏಕಸದಸ್ಯ ಸಮಿತಿ ರಚಿಸಲಾಗಿದೆ. ರಾಜ್ಯದ ಎಲ್ಲ ರಸ್ತೆ ಸಾರಿಗೆ ಸಂಸ್ಥೆಗಳ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಡೀಕರಣಗಳ ಸಂಪೂರ್ಣ ಅಧ್ಯಯನ ನಡೆಸಿ ಮೂರು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.

KSRTC, BMTC, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ restructuring, asset monetisation ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಡೀಕರಣಗಳ ಸಂಪೂರ್ಣ ಅಧ್ಯಯನ ನಡೆಸಿ ಮೂರು ತಿಂಗಳೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ದೇಶನ ನೀಡಲಾಗಿದೆ.

Edited By : Vijay Kumar
PublicNext

PublicNext

01/12/2021 08:35 pm

Cinque Terre

47.47 K

Cinque Terre

0