ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ-ಧಾರವಾಡ ಜನರಿಗಾಗಿ ರೈಲ್ವೆ ಸಚಿವರಿಗೆ ವಿಶೇಷ ಮನವಿ ಸಲ್ಲಿಸಿದ ಪ್ರಹ್ಲಾದ್ ಜೋಶಿ

ನವದೆಹಲಿ: ಬೆಂಗಳೂರು-ಹುಬ್ಬಳ್ಳಿ- ಧಾರವಾಡ ಮುಖಾಂತರ ನವದೆಹಲಿಗೆ ಪ್ರತ್ಯೇಕ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಆರಂಭ ಸೇರಿದಂತೆ ವಿವಿಧ ರೈಲ್ವೆ ಯೋಜನೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸೋಮವಾರ ಮನವಿ ಸಲ್ಲಿಸಿದ್ದಾರೆ.

ಹೊಸ ರೈಲಿನ ಅವಶ್ಯಕತೆ ಕುರಿತು ಸಚಿವರಿಗೆ ವಿವರಿಸಿ, ಧಾರವಾಡದಿಂದ ಬೆಂಗಳೂರಿಗೆ 'ವಂದೇ ಭಾರತ' ರೈಲನ್ನು ಆರಂಭಿಸುವಂತೆ ಮನವಿ ಮಾಡಿದರು. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಸದ್ಯದಲ್ಲೇ ಈ ಎರಡೂ ರೈಲುಗಳ ಸೇವೆಯನ್ನು ಆರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕುಸಗಲ್ಲ- ಅಮರಗೋಳ ಹೊಸ ರೈಲ್ವೆ ಬೈಪಾಸ್‌ನ ಎರಡೂ ಬದಿಗಳಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣಕ್ಕೂ ಸಚಿವ ಜೋಶಿ ಕೋರಿದರು. ಈ ಸರ್ವಿಸ್‌ ರಸ್ತೆ ನಿರ್ಮಾಣದಿಂದ ರೈಲ್ವೆ ಲೈನಿನ ಅಕ್ಕ ಪಕ್ಕದ ಗ್ರಾಮಗಳ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ರೈತರಿಗೆ ಅನುಕೂಲ ಆಗಲಿದೆ ಎಂದು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಈ ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

11/01/2022 03:34 pm

Cinque Terre

25.01 K

Cinque Terre

1