ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು ರಸ್ತೆ ಮೇಲ್ಸೇತುವೆ ಸಂಚಾರಕ್ಕೆ ಯೋಗ್ಯವಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ-4ರ ತುಮಕೂರು ರಸ್ತೆ ಮೇಲ್ಸೇತುವೆ ಕಳಪೆ ಕಾಮಗಾರಿಯಿಂದ ಆಗಿದ್ದು, ಭಾರೀ ವಾಹನ ಸಂಚಾರಕ್ಕೆ ಯೋಗ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಜೆಡಿಎಸ್ ಶಾಸಕ ಆರ್. ಮಂಜುನಾಥ್ ಮಾಡಿದ ಪ್ರಸ್ತಾಪಕ್ಕೆ ಶೂನ್ಯವೇಳೆಯಲ್ಲಿ ಉತ್ತರಿಸಿದ ಸಿಎಂ ಬೊಮ್ಮಾಯಿ, 'ತುಮಕೂರು ರಸ್ತೆ ಮೇಲ್ಸೇತುವೆಯು ಭಾರೀ ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಹೀಗಾಗಿ ಹೊಸದಾಗಿ ಮೇಲ್ಸೇತುವೆ ಮಾಡಬೇಕಾಗಿದೆ. ಈ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು. ಈ ಬಗ್ಗೆ ಒಂದು ವಾರದಲ್ಲಿ ತೀರ್ಮಾನಿಸುತ್ತಾರೆ. ಲೋಡ್ ಟೆಸ್ಟಿಂಗ್‍ನಲ್ಲಿ ಅನುಮತಿ ಸಿಕ್ಕರೆ ಎರಡು-ಮೂರು ದಿನಗಳಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ಸಿಗಲಿದೆ' ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

15/02/2022 09:04 pm

Cinque Terre

22.76 K

Cinque Terre

1