ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು- ಪುಣೆ ನಡುವೆ ಹೊಸ ಹೆದ್ದಾರಿ: ವಿಶೇಷತೆ ಏನು ಗೊತ್ತಾ?

ಮುಂಬೈ: ಪುಣೆ ಹಾಗೂ ಬೆಂಗಳೂರು ನಡುವೆ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವುದಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಘೋಷಣೆ ಮಾಡಿದ್ದಾರೆ.

ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, "ಈಗಾಗಲೇ ಇರುವ ಪುಣೆ- ಬೆಂಗಳೂರು ರಸ್ತೆ 775 ಕಿ.ಮೀ. ಉದ್ದವಿದ್ದು, ಮಳೆಗಾಲದಲ್ಲಿ ಮುಳುಗಡೆಯಾಗುತ್ತಿದೆ. ಯಾವುದೇ ಸಂದರ್ಭದಲ್ಲೂ ಮುಳುಗಡೆಯಾಗದ ರೀತಿಯ ವಿನ್ಯಾಸವನ್ನು ಹೊಸ ಹೆದ್ದಾರಿ ಹೊಂದಿರಲಿದೆ. ಹೊಸ ಹೆದ್ದಾರಿ 699 ಕಿ.ಮೀ. ಉದ್ದವಿರಲಿದೆ (ಈಗಿರುವ ರಸ್ತೆಗಿಂತ 76 ಕಿ.ಮೀ. ಕಡಿಮೆ). ಈ ಯೋಜನೆಗೆ 40 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಇದು ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರಿಗೆ ಸಂಪರ್ಕಿಸಲಿದೆ. ಈಗ ಇರುವ ಸತಾರಾ, ಕೊಲ್ಲಾಪುರ, ಬೆಳಗಾವಿ, ಹುಬ್ಬಳ್ಳಿ, ಹಾವೇರಿ ಮಾರ್ಗದ ಹೆದ್ದಾರಿ ಮೇಲಿನ ಒತ್ತಡವನ್ನು ಹೊಸ ರಸ್ತೆ ತಗ್ಗಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಯಾವ ಮಾರ್ಗದಲ್ಲಿ ಹೆದ್ದಾರಿ: ಹೊಸ ರಸ್ತೆ ಸತಾರಾ, ಸಾಂಗ್ಲಿ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರು ತಲುಪಲಿದೆ.

ಈಗಿನ ಹೆದ್ದಾರಿ ಮಾರ್ಗ: ಪುಣೆ, ಕೊಲ್ಲಾಪುರ, ಬೆಳಗಾವಿ- ಹುಬ್ಬಳ್ಳಿ- ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮೂಲಕ ಬೆಂಗಳೂರು ಸಂಪರ್ಕಿಸುತ್ತದೆ.

Edited By : Vijay Kumar
PublicNext

PublicNext

28/03/2022 11:11 am

Cinque Terre

29.83 K

Cinque Terre

0