ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ಈಗಾಗಲೇ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿದೆ. ಇದೇ ಮಾದರಿಯಲ್ಲಿ ಯುಕೆಪಿಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಯೋಜನಾ ಸ್ಥಾನಮಾನವು ಕೇಂದ್ರದ ಅನುದಾನವನ್ನು ಪಡೆಯಲು ಸಹಾಯ ಮಾಡುತ್ತದೆ. ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿತ್ತು, ಇದು 20 ಗ್ರಾಮಗಳನ್ನು ಮುಳುಗಿಸುತ್ತದೆ. ಈ ಯೋಜನೆಗೆ 1.32 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಗತ್ಯವಿದೆ. ಕೃಷ್ಣಾ ಕಣಿವೆ ನೀರಿನ ಯೋಜನೆಗಳಿಗಾಗಿ ಸರ್ಕಾರ 3,000 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಸಚಿವ ಕಾರಜೋಳ ಹೇಳಿದರು.
PublicNext
14/06/2022 10:14 am