ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೋಣಿಗಾಲ್-ಶಿರಾಡಿಘಾಟ್ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್!

ಹಾಸನ: ದೋಣಿಗಾಲ್-ಶಿರಾಡಿಘಾಟ್ ಮಾರ್ಗದಲ್ಲಿ ಈಗ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ಲಾರಿ-ಬಸ್ ಸೇರಿ ಎಲ್ಲಾ ವಾಹನಗಳ ಸಂಚಾರಕ್ಕೆ ಈಗ ಗ್ರೀನ್ ಸಿಗ್ನಲ್ ಸಿಕ್ಕಿದೆ.

ರಾಷ್ಟ್ರೀಯ ಹೆದ್ದಾರಿ-75ರಲ್ಲಿ ವಾಹನ ಸಂಚಾರಕ್ಕೆ ಹೆದ್ದಾರಿ ಪ್ರಾಧಿಕಾರದವರ ವರದಿ ಮೇರೆಗೆ ಎಲ್ಲ ರೀತಿಯ ವಾಹನ ಸಂಚಾರಕ್ಕೆ ಈಗ ಅನುಮತಿ ನೀಡಲಾಗಿದೆ.

ಕಳೆದ ಒಂದು ವಾರದ ಹಿಂದೆ ಇಲ್ಲಿ ಭಾರೀ ಮಳೆ ಆಗಿತ್ತು.ಇದರಿಂದ ರಸ್ತೆ ಕೂಡ ಕುಸಿದು ಹೋಗಿತ್ತು.ಈ ಕಾರಣಕ್ಕೆ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದರು. ಈಗ ಎಲ್ಲ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ತಹಶೀಲ್ದಾರ ಜಯಕುಮಾರ್ ಹೇಳಿದ್ದಾರೆ.

Edited By :
PublicNext

PublicNext

21/07/2022 05:26 pm

Cinque Terre

42.22 K

Cinque Terre

0

ಸಂಬಂಧಿತ ಸುದ್ದಿ