ಬೆಂಗಳೂರು: ಓಲಾ, ಉಬರ್ನಲ್ಲಿ ಆಟೋ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆ ಕಂಪನಿಗಳಿಗೆ ನೋಟೀಸ್ ಜಾರಿಗೊಳಿಸಿದೆ.
ಹೌದು. ಓಲಾ- ಉಬರ್ ಪ್ರಯಾಣಿಕರ ಬಳಿ ಸುಲಿಗೆ ಮಾಡುತ್ತಿರುವುದರಿಂದ ಆ್ಯಪ್ ಆಧಾರಿತ ಸಂಸ್ಥೆಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಇಲಾಖೆಯಿಂದ ಆ್ಯಪ್ ಆಧಾರಿತ ಓಲಾ ಮತ್ತು ಊಬರ್ ಕಂಪನಿಗೆ ನೋಟೀಸ್ ಜಾರಿ ಮಾಡಲಾಗಿದೆ.
ಸಾರಿಗೆ ಇಲಾಖೆಯ ನಿಯಮದ ಪ್ರಕಾರ ಆಟೋಗಳ ಕನಿಷ್ಟ ದರ 30 ರೂ. ಇರಬೇಕು. ವೇಟಿಂಗ್ ಚಾರ್ಜ್ ಅನ್ನು ಪ್ರತಿ 5 ನಿಮಿಷಕ್ಕೆ 5 ರೂ.ಗಳಂತೆ ನಿಗದಿ ಪಡಿಸಲಾಗಿತ್ತು. ಆದರೆ ಸಾರಿಗೆ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ 100 ರೂ.ಗಳಷ್ಟು ಹಣ ವಸೂಲಿ ಮಾಡಲಾಗುತ್ತಿದೆ. ಆ್ಯಪ್ ಆಧಾರಿತ ಟ್ರಾನ್ಸ್‌ಪೋರ್ಟ್ ಸಂಸ್ಥೆಗಳು ಪ್ರಯಾಣಿಕರ ಬಳಿ ಸುಲಿಗೆ ಮಾಡುತ್ತಿರುವುದರಿಂದ ಆ್ಯಪ್ ಆಧಾರಿತ ಸಂಸ್ಥೆಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ.
PublicNext
07/10/2022 03:24 pm