ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿ.15ರಿಂದ ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸೇವೆ ಪುನರಾರಂಭ

ನವದೆಹಲಿ: ಹೊಸ ವರ್ಷ ಮತ್ತು ಕ್ರಿಸ್‌ಮಸ್ ಸಂದರ್ಭದಲ್ಲಿ ವಿದೇಶಕ್ಕೆ ಭೇಟಿ ನೀಡಲು ಬಯಸುವ ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ.

ಹೌದು. ಡಿಸೆಂಬರ್ 15ರಿಂದ ಯುಕೆ, ಫ್ರಾನ್ಸ್, ಜರ್ಮನಿ, ನೆದರ್ಲ್ಯಾಂಡ್ಸ್, ಫಿನ್ಲ್ಯಾಂಡ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಚೀನಾ, ಮಾರಿಷಸ್, ಸಿಂಗಾಪುರ್, ಬಾಂಗ್ಲಾದೇಶ, ಬೋಟ್ಸ್ವಾನಾ ಮತ್ತು ಜಿಂಬಾಬ್ವೆ ಮತ್ತು ನ್ಯೂಜಿಲೆಂಡ್ ಸೇರಿದಂತೆ 14 ದೇಶಗಳನ್ನು ಹೊರತುಪಡಿಸಿ ಉಳಿದ ದೇಶಗಳಿಗೆ ನಿಯಮಿತ ಅಂತರರಾಷ್ಟ್ರೀಯ ವಿಮಾನಯಾನ ಸೇವೆ ಪ್ರಾರಂಭವಾಗಲಿವೆ. ಕೊರೊನಾ ವೈರಸ್‌ನ ಹೊಸ ರೂಪಾಂತರವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ (MoCA) ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.

ಮಾರ್ಚ್ 2020ರಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಅಪ್ಪಳಿಸಿದ ನಂತರ ಭಾರತವು ತನ್ನ ಅಂತರರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು. ಆದರೆ ನಂತರ ವಂದೇ ಭಾರತ್ ವಿಮಾನಗಳು ಮತ್ತು ಬಬಲ್ ಒಪ್ಪಂದದ ಮೂಲಕ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಅಂತರರಾಷ್ಟ್ರೀಯ ವಿಮಾನ ಸೇವೆಯ ಸೇವೆಯನ್ನು ಕ್ರಮಬದ್ಧಗೊಳಿಸದಿರುವ 14 ದೇಶಗಳಲ್ಲಿ, ಬಬಲ್ ಒಪ್ಪಂದದ ಅಡಿಯಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸೇವೆಯು ಮುಂದುವರೆಯಲಿದೆ.

Edited By : Vijay Kumar
PublicNext

PublicNext

27/11/2021 09:11 pm

Cinque Terre

52.19 K

Cinque Terre

1

ಸಂಬಂಧಿತ ಸುದ್ದಿ