ಕೊಪ್ಪಳ: ಕಳಪೆ ಧಾನ್ಯಗಳಿಂದ ತಯಾರಿಸಿದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ನಿಡಶೇಸಿ ಮುರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಅನ್ನ ಸಾಂಬಾರ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಕಾಣಿಸಿಕೊಂಡಿರಲಿಲ್ಲ. ಆದರೆ ಇಂದು ಮುಂಜಾನೆ ಇಡ್ಲಿ ತಯಾರಿಸುವಾಗ ಇಡ್ಲಿ ಹಿಟ್ಟಿನಲ್ಲಿ ಹುಳುಗಳು ಕಂಡು ಬಂದಿದ್ದವು. ಹಿಟ್ಟಿನಲ್ಲಿ ಹುಳುಗಳು ಇರುವ ಹಿನ್ನೆಲೆ ಕೆಲ ವಿದ್ಯಾರ್ಥಿಗಳು ಅದನ್ನು ಸೇವಿಸಿರಲಿಲ್ಲ. ಹೀಗಾಗಿ 2 ತಾಸಿನ ನಂತರ ಪಲಾವು ತಯಾರಿಸಿ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಪಲಾವು ಸೇವಿಸಿದ ನಂತರ ವಿದ್ಯಾರ್ಥಿಗಳಲ್ಲಿ ತಲೆ ಸುತ್ತು ಕಾಣಿಸಿಕೊಂಡಿದೆ.
ತಕ್ಷಣ ವಸತಿ ಶಾಲೆಯ ಸಿಬ್ಬಂದಿ ವಿದ್ಯಾರ್ಥಿಗಳನ್ನು ಕುಷ್ಟಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚೇತಿರಿಸಿಕೊಳ್ಳುತ್ತಿದ್ದಾರೆಂಬ ಮಾಹಿತಿ ಇದೆ.
PublicNext
28/11/2021 05:40 pm