ವಿಜಯನಗರ: ಕಲುಷಿತ ನೀರು ಕುಡಿದ ಪರಿಣಾಮ 50 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಜಿಲ್ಲೆಯ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಜೆ.ಜೆ.ಎಂ ಯೋಜನೆ ಅಡಿ ಪೈಪಲೈನ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಅಲ್ಲಲ್ಲಿ ಪೈಪ್‍ಗಳು ಒಡೆದಿವೆ. ಒಡೆದ ಪೈಪ್ ಮುಖಾಂತರ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸರಬರಾಜು ಆಗಿದೆ. ಪರಿಣಾಮ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಗ್ರಾಮಸ್ಥರು ಸಂಪೂರ್ಣ ಅಸ್ವಸ್ಥರಾಗಿದ್ದಾರೆ.
ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಜನರು ಆಕ್ರೋಶಗೊಂಡಿದ್ದಾರೆ. ಅದು ಅಲ್ಲದೇ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.
PublicNext
23/09/2021 03:57 pm