ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಪಾಲಾ ಬಾದಾಮಿ ಸಂಪರ್ಕ ಕಲ್ಪಿಸುವ ಮಾನ್ವಿ ಪೆಟ್ರೋಲಿಯಂ ಬಂಕ್ ಹತ್ತಿರದ ಸವಣೂರ ರಸ್ತೆಯ ಸೇತುವೆ ಕುಸಿದಿದೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದ ಇಟ್ಟಿಕೆರೆಯೂ ತುಂಬಿದ್ದರಿಂದ ಸೇತುವೆ ಕುಸಿದಿದ್ದು, ಅಪಾಯಕ್ಕೆ ದಾರಿ ಮಾಡಿಕೊಟ್ಟಿದೆ. ಈ ಸೇತುವೆ ಮೇಲೆ ನೂರಾರು ವಾಹನಗಳು ಓಡಾಡುತ್ತಿದ್ದು, ದುರಂತ ಸಂಭವಿಸುವ ಮೊದಲೇ ಅಧಿಕಾರಿಗಳು ಸರಿಪಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಲಕ್ಷ್ಮೇಶ್ವರ ಪಟ್ಟಣದ ಸವಣೂರ ರಸ್ತೆಯ ಸೇತುವೆ ಹಾಗೂ ರಸ್ತೆಯನ್ನು ಸರಿಪಡಿಸುವಂತೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಯಾವ ಅಧಿಕಾರಿಗಳೂ ಸ್ಪಂದಿಸಿಲ್ಲ ಎಂದು ಸ್ಥಳೀಯರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಸೇತುವೆ ಮೇಲೆ ಓವರ್ ಲೋಡ್ ಟಿಪ್ಪರ್ ಗಳ ಹಾವಳಿ ಹೆಚ್ಚುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
01/09/2022 03:42 pm