ತುಮಕೂರು:ನಗರದಲ್ಲಿ ಶನಿವಾರ ತಡರಾತ್ರಿ ಸುರಿದ ಭಾರಿ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಸಿದೆ. ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಅಧಿಕಾರಿಗಳು ಮಾಡಿರುವ ಅವಾಂತರಗಳಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.ಸದಾಶಿವನಗರ,ನಜರಾಬಾದ್ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ.
ತುಮಕೂರಿನ ದೇವನೂರು ಚರ್ಚ್ ಬಳಿ ಮನೆಯೊಂದಕ್ಕೆ ನೀರು ನುಗ್ಗಿ ಮನೆಯಲ್ಲಿದ್ದ ವೃದ್ದ ವೀರಣ್ಣ (75) ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿರುವ ತಗ್ಗು ಪ್ರದೇಶದ ಬಡಾವಣೆಗಳಿಗೂ ನೀರು ನುಗ್ಗಿ ಜನ ಪರದಾಡುವಂತಾಗಿದೆ.
PublicNext
31/07/2022 12:05 pm