ಬೆಂಗಳೂರು: ಝೀಬ್ರಾ ಕ್ರಾಸ್ ಬಿಟ್ಟು ಎಲ್ಲೆಂದರಲ್ಲಿ ರಸ್ತೆ ದಾಟುವ ಪಾದಚಾರಿಗಳಿಗೆ ಫೈನ್ ಹಾಕಲು ಬೆಂಗಳೂರು ಸಂಚಾರಿ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅದು ಕೂಡ ಶೀಘ್ರದಲ್ಲೇ ಈ ನಿಯಮ ಜಾರಿಗೆ ಬರಲಿದೆ ಎನ್ನಲಾಗಿದೆ.
ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತರುವುದರ ಹಿಂದೆ ಬಲವಾದ ಕಾರಣವಿದೆ. ಕಳೆದ ವರ್ಷ ಝೀಬ್ರಾ ಕ್ರಾಸ್ ಬಿಟ್ಟು ಬೇರೆಡೆ ರಸ್ತೆ ದಾಟುತ್ತಿದ್ದ 69 ಪಾದಚಾರಿಗಳು ಅಪಘಾತಗಳಿಗೆ ಬಲಿಯಾಗಿದ್ದಾರೆ. ಹೀಗಾಗಿ ಸಂಚಾರಿ ಪೊಲೀಸರು ಝೀಬ್ರಾ ಕ್ರಾಸ್ ಬಿಟ್ಟು ಎಲ್ಲಂದರಲ್ಲಿ ರಸ್ತೆ ದಾಟುವ ಪಾದಚಾರಿಗಳಿಗೆ 10 ರೂ. ದಂಡ ವಿಧಿಸುವ ಯೋಜನೆಯನ್ನ ಜಾರಿ ಮಾಡಲು ಮುಂದಾಗಿದ್ದಾರೆ.
ಆದರೆ ಬೆಂಗಳೂರು ನಗರದ ಎಷ್ಟೋ ರಸ್ತೆಗಳಲ್ಲಿ ಸರಿಯಾದ ಝೀಬ್ರಾ ಕ್ರಾಸಿಂಗ್ ವ್ಯವಸ್ಥೆ ಇಲ್ಲ. ಪಾದಚಾರಿ ಮಾರ್ಗಗಳು ಕೂಡ ಸರಿಯಾಗಿಲ್ಲ. ಹೀಗಿರುವಾಗ ಪಾದಾಚಾರಿಗಳಿಗೆ ಫೈನ್ ಹಾಕುವ ಕಾರ್ಯ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ಎನ್ನುವ ಪ್ರಶ್ನಾರ್ಥಕ ಕುತೂಹಲ.
PublicNext
24/01/2022 11:40 am