ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಶೆಟ್ಟಿಕೆರಿ ತುಂಬಿ ಕೋಡಿ ಬಿದ್ದು ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಲಕ್ಷ್ಮೇಶ್ವರ ಪಟ್ಟಣದ ಇಟ್ಟಿಕೇರಿ ಕೆರೆ ತುಂಬಿ ಮನೆಗಳಿಗೆ ನೀರು ನುಗ್ಗಿರುವ ಪ್ರದೇಶಗಳಿಗೆ ಹಾಗೂ ಅಗಸ್ತ್ಯ ತೀರ್ಥದ ಸಮೀಪವಿರುವ ರಂಗಚಾರಿ ಪ್ಲಾಟಗಳಿಗೆ ನೀರು ನುಗ್ಗಿ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದು ಅನೇಕ ವರ್ಷಗಳಿಂದ ನಾವು ಅನುಭವಿಸುತ್ತಿರುವ ನೋವಾಗಿದೆ. ಮನೆಗಳಿಗೆ ನೀರು ನುಗ್ಗಿರುವುದು ಇದು ಮೊದಲೇನಲ್ಲ. ಮಳೆ ಸುರಿದಾಗೊಮ್ಮೆ ನೀರು ನುಗ್ಗಿ ಮನೆಯಲ್ಲಿನ ಆಹಾರ ಸಾಮಗ್ರಿಗಳು ನೀರು ಪಾಲಾಗುತ್ತೆ. ಸಣ್ಣ ಪುಟ್ಟ ಮಕ್ಕಳನ್ನು ಕಟ್ಟಿಕೊಂಡು ರಾತ್ರಿ ಈ ನೀರಿನಲ್ಲಿ ಕಾಲ ಕಳೆದಿದ್ದೇವೆ. 2 ದಿನಗಳಿಂದ ಮನೆಯಲ್ಲಿ ಅಡುಗೆ ಸಹಿತ ಮಾಡಿಲ್ಲ ಉಪವಾಸ ಇದ್ದೇವೆ. ನಮಗೆ ಶಾಶ್ವತ ಪರಿಹಾರ ನೀಡಬೇಕು ಎಂದು ತಮ್ಮ ಅಳಲನ್ನು ಜಿಲ್ಲಾಧಿಕಾರಿಗಳ ಮಂದೆ ತೋಡಿಕೊಂಡರು.

ನಂತರ ಜಿಲ್ಲಾಧಿಕಾರಿಗಳು ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಿ ಪುನರ್ವಸತಿ ಕೇಂದ್ರ ಸ್ಥಾಪಿಸಿ ಆಹಾರ ನೀಡಲು ಮತ್ತು ಶಾಶ್ವತ ಪರಿಹಾರ ಒದಗಿಸಲು ತಹಶೀಲ್ದಾರ ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚನೆ ಮಾಡಿದರು.

Edited By : Manjunath H D
PublicNext

PublicNext

30/08/2022 05:03 pm

Cinque Terre

30.88 K

Cinque Terre

0

ಸಂಬಂಧಿತ ಸುದ್ದಿ