ಹಾವೇರಿ: ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ವರುಣನ ಅಬ್ಬರ ಜೋರಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಹಳ್ಳ ಕೊಳ್ಳ ನದಿಗಳು ತುಂಬಿ ರಸ್ತೆ ಜಲಾವೃತಗೊಂಡಿವೆ.
ಕುಮದ್ವತಿ ನದಿ ತುಂಬಿ ಹರಿಯುತ್ತಿರುವುದರಿಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಚಾರ ಬಂದ್ ಆಗಿದೆ.
ಲಿಂಗದಹಳ್ಳಿ ಗ್ರಾಮದ ಸುತ್ತಮುತ್ತ ನೀರು ಆವರಿಸಿಕೊಂಡಿದೆ. ಇದರಿಂದ ಗ್ರಾಮಸ್ಥರು ಬೇರೆ ಕಡೆ ಹೋಗಲು ಪರದಾಡುತ್ತಿದ್ದಾರೆ. ತೆಪ್ಪದ ಮೂಲಕ ಬೇರೆ ಕಡೆ ಹೋಗುತ್ತಿದ್ದಾರೆ.
PublicNext
16/07/2022 12:37 pm