ಗದಗ: ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಸುವ ಹಮ್ಮಿಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಅವರು ಬಾಗಿನ ಅರ್ಪಣೆ ಮಾಡಿದರು.
ಮುಂಡರಗಿ ತಾಲೂಕಿನ ಹಮ್ಮಿಗಿ ಡ್ಯಾಂ ತಟದಲ್ಲಿ ಗಂಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಗರಸಭೆ ಸರ್ವ ಸದಸ್ಯರು ಭಾಗಿನ ಅರ್ಪಣೆ ಕಾರ್ಯದಲ್ಲಿ ಭಾಗಿಯಾಗಿದರು. ನಂತರ ಮಾತನಾಡಿದ ಅವರು, ಗಂಗಾಮಾತೆಗೆ ಬಾಗಿನ ಅರ್ಪಿಸುವುದು ಭಾರತೀಯರ ಸಂಸ್ಕೃತಿ. ನಮ್ಮ ಸಂಸ್ಕೃತಿ, ಸಂಪ್ರದಾಯ ಮುಂದುವರೆಸಿಕೊಂಡು ಹೋಗುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಅವಳಿ ನಗರಕ್ಕೆ ನೀರು ಪೂರೈಸುವ ಹಮ್ಮಿಗಿ ಡ್ಯಾಂ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಗಂಗಾಮಾತೆಗೆ ಬಾಗಿನ ಅರ್ಪಿಸಲಾಗಿದೆ. ಅವಳಿ ನಗರಕ್ಕೆ ನೀರು ಪೂರೈಸುವ ಜಲಾಶಯ ಅವಧಿಗೂ ಮುನ್ನವೇ ಭರ್ತಿಯಾಗಿರುವುದು ತುಂಬಾ ಸಂತಸ ತಂದಿದೆ.
PublicNext
17/07/2022 04:39 pm