ವರದಿ: ಸಂತೋಷ ಬಡಕಂಬಿ
ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಪದೇ ಪದೇ ಮುಳುಗಡೆಯಾಗುವ ಸಂಪರ್ಕ ಸೇತುವೆಯಿಂದ ರೋಸಿ ಹೋದ ಜನರು ವೀಡಿಯೋ ಮಾಡಿ ಅಳಲು ತೋಡಿಕೊಂಡಿದ್ದಾರೆ.
ಖಾನಾಪುರ ತಾಲೂಕಿನ ಸಾತ್ನಾಳಿ ಹಾಗೂ ಮಾಚಾಳಿ ಗ್ರಾಮಸ್ಥರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ.
ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ಪಾಂಡ್ರಿ ನದಿ, ನಿರಂತರ ಮಳೆಗೆ ಸೇತುವೆ ಮೇಲೆ ನಾಲ್ಕು ಅಡಿ ನೀರು ಬಂದು, ಮುಳುಗಡೆಯಾದ ಸೇತುವೆ ಮೇಲೆಯೇ ಬೈಕ್ ಸವಾರರು ಸೇರಿದಂತೆ ಗ್ರಾಮಸ್ಥರು ಜೀವ ಭಯದಲ್ಲೇ ಸಂಚಾರ ಮಾಡುತ್ತಿದ್ದಾರೆ.
'ಪ್ರತಿ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಿಸುತ್ತೇವೆ' ಎಂಎಲ್‌ಎ, ಎಂ.ಪಿ ಸೇರಿ ಎಲ್ಲ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದೇವೆ. ಅಲ್ಲದೆ ವಿದ್ಯಾರ್ಥಿಗಳು, ರೈತರು, ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಹಾಗೂ ಗ್ರಾಮದಲ್ಲಿ ಯಾರಿಗಾದರೂ ಅನಾರೋಗ್ಯ ಕಾಣಿಸಿಕೊಂಡರೇ ವೈದ್ಯಕೀಯ ಸೌಲಭ್ಯನೂ ಸಿಗುವುದಿಲ್ಲ. ಹೀಗಾಗಿ ಸೇತುವೆ ಎತ್ತರ ಮಟ್ಟ ಹೆಚ್ಚಿಸಿ ಅನುಕೂಲ ಮಾಡಿ' ಎಂದು ಸಾರ್ವಜನಿಕರು ಮನವಿ ಮಾಡಿಕೊಂಡರು.
PublicNext
19/07/2022 05:04 pm