ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಕಂತನಹಳ್ಳಿ ಗ್ರಾಮದ ಕೆರೆ ಕೋಡಿ ಬಿದ್ದ ಪರಿಣಾಮ ಸಮೀಪದಲ್ಲಿದ್ದ ರಸ್ತೆ ಕೊಚ್ಚಿ ಹೋಗಿದೆ. ಇದರಿಂದಾಗಿ ಗ್ರಾಮಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೆರೆಯಲ್ಲಿ ಹೆಚ್ಚುವರಿ ನೀರು ಸಂಗ್ರಹವಾಗಿದ್ದರಿಂದ ಸ್ಥಳೀಯರು ಜೆಸಿಬಿ ಮೂಲಕ ಕೆರೆಯ ಒಡ್ಡನ್ನು ಸರಿಪಡಿಸಿ ನೀರು ನುಗ್ಗದಂತೆ ಮುಂಜಾಗ್ರತೆ ಕಾರ್ಯಕ್ಕೆ ಮುಂದಾಗಿದ್ದಾರೆ. ಒಟ್ಟಾರೆ ಯಾವು ಸಾವುನೋವು ಸಂಭವಿಸಿಲ್ಲವಾದರೂ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್
PublicNext
05/08/2022 04:23 pm