ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಹೆಬ್ಬಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿದ್ದಾಪುರ ಬಿ.ಗ್ರಾಮದ ರಸ್ತೆಗಳೆಲ್ಲ ನದಿಗಳಂತಾಗಿದ್ದು,ಜನರು ಮನೆಯಿಂದ ಹೊರ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಹುಣಸಗಿ ತಾಲ್ಲೂಕಿನಾದ್ಯಂತ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮದ ರಸ್ತೆಗಳಲ್ಲಿ ನೀರು ನಿಂತಿದ್ದು, ಗ್ರಾಮದಲ್ಲಿ ಸರಿಯಾದ ರೀತಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ರಸ್ತೆಗಳು ನದಿಯಂತಾಗಿದ್ದು, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಕಲುಷಿತ ನೀರಿನಲ್ಲೆ ಜೀವ ಬಿಗಿ ಹಿಡಿದು ತೆರಳಬೇಕಿದೆ.
ಗ್ರಾಮದಲ್ಲಿರುವ ಅನೇಕ ಮನೆಗಳಿಗೂ ಮಳೆ ನೀರು ನುಗ್ಗಿದ್ದು,ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸುರಪುರ ಕ್ಷೇತ್ರದ ಶಾಸಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಸ್ಥಳೀಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಸದ್ಯ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸಿದ್ದಾಪುರ ಬಿ.ಗ್ರಾಮಕ್ಕೆ ಸೂಕ್ತ ಚರಂಡಿ , ಸಿಸಿ ರಸ್ತೆ ವ್ಯವಸ್ಥೆ ಕಲ್ಪಿಸಬೇಕಿದೆ.
-----
ವರದಿ: ಮೌನೇಶ ಬಿ.ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್, ಯಾದಗಿರಿ
PublicNext
05/08/2022 08:01 pm