ಬೆಂಗಳೂರು: ನಿನ್ನೆಯಂತೆ ಇಂದು ಕೂಡ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಜೊತೆಗೆ ವಾಯವ್ಯ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ಸುಗಳು ರೋಡಿಗಿಳಿಯಲ್ಲ. ಈ ಎಲ್ಲ ಸಾರಿಗೆ ಸಂಸ್ಥೆಗಳ ಸಿಬ್ಬಂದಿಯ ಪ್ರತಿಭಟನೆ ಇಂದು ಕೂಡ ಮುಂದುವರೆಯಲಿದೆ.
ಎಲ್ಲ ಬಸ್ಸುಗಳನ್ನು ಡಿಪೊದಲ್ಲಿ ಹಾಕಿರುವ ಚಾಲಕರು ಹಾಗೂ ನಿರ್ವಾಹಕರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ. ಎಲ್ಲ ಸಾರಿಗೆ ನೌಕರರನ್ನು ಪ್ರತಿನಿಧಿಸುತ್ತಿರುವ ಸಿಐಟಿಯು ಮುಖಂಡ ಅನಂತಸುಬ್ಬರಾವ್ ಅವರೊಂದಿಗೆ ಸಾರಿಗೆ ಸಚಿವ ಲಕ್ಷಣ ಸವದಿ ನಿನ್ನೆ ಮಾತುಕತೆ ನಡೆಸಿದ್ದಾರೆ. ಆದ್ರೆ ಈ ಮಾತುಕತೆ ವಿಫಲವಾಗಿದೆ. ಹೀಗಾಗಿ ಸಾರಿಗೆ ನೌಕರರ ಪ್ರತಿಭಟನೆ ಎರಡನೇ ದಿನವೂ ಮುಂದುವರೆಯಲಿದೆ.
PublicNext
12/12/2020 08:07 am