ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಕುಂದುವಾಡ ಕೆರೆಗೆ ಭೇಟಿ ಕೊಟ್ಟ ಎಂಜಿನಿಯರ್‌ರನ್ನು ತರಾಟೆಗೆ ತೆಗೆದುಕೊಂಡ ಜನರು...!

ದಾವಣಗೆರೆ: ನಗರದ ಜನರಿಗೆ ಕುಡಿಯುವ ನೀರಿಗಾಗಿ ನಿರ್ಮಿಸಲಾಗಿದ್ದ ಕೆರೆಯು ಅವೈಜ್ಞಾನಿಕ ಮತ್ತು ಕಳಪೆಯಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿ ಎಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ಸ್ಥಳೀಯರು ಮತ್ತು ವಾಯುವಿಹಾರಿಗಳು ಎಂಜಿನಿಯರ್‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆರೆಯಲ್ಲಿನ ಹೂಳೆತ್ತುವ ಕಾಮಗಾರಿಯು ಸಮರ್ಪಕವಾಗಿ ನಡೆಯುತ್ತಿಲ್ಲ. ಹೂಳು ತೆಗೆದು ಕೆರೆಯಿಂದ ಹೊರ ಹಾಕುವ ಬದಲು ಅಲ್ಲಿಯೇ ಮಣ್ಣನ್ನು ಹಾಕಲಾಗುತ್ತಿದೆ. ಪಾರದರ್ಶಕವಾಗಿ ನಡೆಯುತ್ತಿಲ್ಲ. ಈ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಸ್ಥಳೀಯರು ಮೇಲಿಂದ ಮೇಲೆ ಆರೋಪ ಮಾಡಿದ್ದರು‌. ಜನರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ನೇತೃತ್ವದ ತಂಡ ಭೇಟಿ ನೀಡಿತ್ತು. ಆಗಲೂ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.

ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸಚಿವರಾಗಿದ್ದಾಗ ಕುಂದುವಾಡ ಕೆರೆ ಸುಂದರವಾಗಿತ್ತು. ಕೆರೆಯ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದರು. ದಾವಣಗೆರೆ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಸಲುವಾಗಿ ಆದಷ್ಟು ವಿಶೇಷ ಆಸಕ್ತಿ ವಹಿಸಿದ್ದರು. ಈ ಕೆರೆಯಲ್ಲಿ ವಿಹಾರಕ್ಕೆ ಬರುತ್ತಿದ್ದ ವಾಯುವಿಹಾರಿಗಳು, ಸ್ಥಳೀಯರು ಹಾಗೂ ವೀಕೆಂಡ್ ಸಮಯದಲ್ಲಿ ಜನರು ಹೆಚ್ಚಾಗಿ ಬರುತ್ತಿದ್ದರು. ಈಗ ಮಾಡುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕವಾಗಿದೆ. ಕಳಪೆ ಕೆಲಸ ಆಗುತ್ತಿದೆ. ಹೊಸ ಪರಿಕರ ಬಳಕೆ ಮಾಡದೇ ಹಳೆಯದ್ದನ್ನೇ ಬಳಸಲಾಗುತ್ತಿದೆ. ವಾಕಿಂಗ್ ಮಾಡುವವರು ನಿತ್ಯವೂ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಮಳೆಗಾಲ ಸದ್ಯದಲ್ಲಿ ಬರಲಿದೆ. ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕಾಮಗಾರಿ ಪಾರದರ್ಶಕವಾಗಿ ಆಗಬೇಕು‌. ಜನರಿಂದ ಯಾವುದೇ ಆರೋಪ ಬಾರದಂತೆ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಪಾಲಿಕೆಯ ವಿರೋಧ ಪಕ್ಷದ ನಾಯಕ ಜಿ. ಎಸ್. ಗಡಿಗುಡಾಳ್ ಮಂಜುನಾಥ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

Edited By :
PublicNext

PublicNext

28/03/2022 06:33 pm

Cinque Terre

39.8 K

Cinque Terre

0