ನವದೆಹಲಿ: ಕೋಟ್ಯಂತರ ಜನರಿಗೆ ಆಧಾರ್ ಕಾರ್ಡ್ ಒದಗಿಸುವ ಯುಐಡಿಎಐ ಮತ್ತೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಆನ್‌ಲೈನ್ ಸೇವೆಯನ್ನು ಮತ್ತೆ ಆರಂಭಿಸಿದೆ.
ಹೌದು. ಆನ್‌ಲೈನ್ ಸೇವೆಯಿಂದಾಗಿ ಇನ್ನುಮುಂದೆ ಆಧಾರ್ ಕೇಂದ್ರಕ್ಕೆ ಹೋಗುವ ಅಗತ್ಯ ಇರುವುದಿಲ್ಲ. ಕಾರ್ಡ್ ಬಳಕೆದಾರರು ತಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಮತ್ತು ಲಿಂಗವನ್ನು ಸುಲಭವಾಗಿ ನವೀಕರಿಸಲು ಸಾಧ್ಯವಾಗುತ್ತದೆ.
ಈ ಬಗ್ಗೆ Uidai.gov.in/images/AadhaarHandbook2020.pdf ನಲ್ಲಿ ಆಧಾರ್ ಕೈಪಿಡಿಯನ್ನು ನೀಡಲಾಗಿದೆ. ಈ ಮಾಹಿತಿ ಆಧಾರದ ಮೇಲೆ ಹೆಸರು, ವಿಳಾಸ ಸೇರಿದಂತೆ ವಿವಿಧ ಮಾಹಿತಿಯನ್ನು ಬದಲಾಯಿಸಬಹುದು. ಆದರೆ ಇದಕ್ಕಾಗಿ ಆಧಾರ್ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಆನ್‌ಲೈನ್ ಅಪಾಯಿಂಟ್ಮೆಂಟ್ ತೆಗೆದುಕೊಳ್ಳುವ ಮೂಲಕ ನೀವು ಈ ಕೆಲಸವನ್ನು ಮಾಡಬಹುದು.
PublicNext
26/12/2020 08:31 am