ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜ.31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಸ್ಥಗಿತ

ನವದೆಹಲಿ: ವಿಶ್ವಾದ್ಯಂತ ಕೊರೊನಾ ವೈರಸ್‌ ರೂಪಾಂತರದ ಆತಂಕ ಹೆಚ್ಚಾದ ಹಿನ್ನೆಲೆ ಭಾರತ ಸರ್ಕಾರವು 2021 ಜನವರಿ 31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ನಿಷೇಧವನ್ನು ವಿಸ್ತರಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​(ಡಿಜಿಸಿಎ), "ಕೇಸ್-ಟು-ಕೇಸ್ ಆಧಾರದ ಮೇಲೆ ಆಯ್ದ ಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳನ್ನು ಅನುಮತಿಸಬಹುದು. ಜೊತೆಗೆ ನಿರ್ಬಂಧವು ವಿಶೇಷ ವಿಮಾನ ಮತ್ತು ಅಂತಾರಾಷ್ಟ್ರೀಯ ಸರಕು ಸಾಗಾಣಿಕೆ ವಿಮಾನಗಳಿಗೆ ಅನ್ವಯಿಸುವುದಿಲ್ಲ'' ಎಂದು ತಿಳಿಸಿದೆ.

Edited By : Vijay Kumar
PublicNext

PublicNext

31/12/2020 10:58 am

Cinque Terre

44.14 K

Cinque Terre

0