ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತಾನಾಡಿದ ಸಿಎಂ ಯಡಿಯೂರಪ್ಪ, ವಿದ್ಯುತ್ ಸರಬರಾಜು ಕಂಪನಿಗಳು, ನಗರ ಸಂಚಾರಿ ಪೊಲೀಸರು ಸಮನ್ವಯ ಸಾಧಿಸಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಸಾಕಾರಗೊಳಿಸಲು ತುರ್ತು ಕ್ರಮವಹಿಸಬೇಕು ಎಂದು ಹೇಳಿದರು.
ದಿನ ಆಯವ್ಯಯದಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಒತ್ತು ನೀಡಲು ಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಇಲಾಖಾವಾರು ರೂಪಿಸಬಹುದಾದ ಜನಪರ ಯೋಜನೆಗಳ ನೀಲನಕ್ಷೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
PublicNext
01/01/2021 06:28 pm