ನವದೆಹಲಿ/ಮಂಗಳೂರು: ಕೊಚ್ಚಿ ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗವು ಭಾರತದ ಅಭಿವೃದ್ಧಿಯ ಚಾಲನಾ ಶಕ್ತಿಯಾಗಿದೆ. ಮುಂದಿನ 6ವರ್ಷಗಳಲ್ಲಿ ಗ್ಯಾಸ್ ಪೈಪ್ ಲೈನ್ ಜಾಲ ದ್ವಿಗುಣವಾಗಲಿದೆ. ಇದು ತಾಂತ್ರಿಕತೆಯ ಅದ್ಭುತ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕದ ಮಂಗಳೂರು- ಕೇರಳ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ ಮಾತನಾಡಿದರು.
1987ರಿಂದ 2014ರ ಅವಧಿಯಲ್ಲಿ ದೇಶದಲ್ಲಿ 15 ಸಾವಿರ ಕಿಮೀ ನೈಸರ್ಗಿಕ ಅನಿಲ ಪೈಪ್ ಲೈನ್ ಅಳವಡಿಸಲಾಗಿತ್ತು. ಆದರೆ ಕಳೆದ ಆರು ವರ್ಷಗಳಲ್ಲಿ 16 ಸಾವಿರ ಕಿಮೀ ನೈಸರ್ಗಿಕ ಅನಿಲ ಪೈಪ್ ಲೈನ್ ಅಳವಡಿಸುವ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ಐದಾರು ವರ್ಷಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದರು.
PublicNext
05/01/2021 11:21 pm