ಶಿವಮೊಗ್ಗ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ (Rapid Action Force) ಸ್ಥಾಪನೆಗೆ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಶೃಂಗೇರಿ ಶ್ರೀ ಶಂಕರ ಮಠದ ಋತ್ವಿಜರ ಮೂಲಕ ಪೂಜಾ ಕೈಂಕರ್ಯಗಳು ನೆರವೇರಿದವು.
ಬೆಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ನಗರದ ಬೊಮ್ಮನಕಟ್ಟೆ ಬಳಿಯಿರುವ ಹೆಲಿಪ್ಯಾಡ್'ಗೆ ಬಂದಿಳಿದ ಗೃಹ ಸಚಿವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಗಮಿಸಿದರು.
ಭೂಮಿ ಪೂಜೆ ವೇಳೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಬಿ.ಕೆ. ಸಂಗಮೇಶ್ವರ್ ಪಾಲ್ಗೊಂಡಿದ್ದರು.
PublicNext
16/01/2021 07:31 pm