ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏಕತಾ ಪ್ರತಿಮೆಗೆ ಚಿಕುಬುಕು ಸಂಪರ್ಕ : ಎಂಟು ರೈಲುಗಳಿಗೆ ಇಂದು ಮೋದಿ ಚಾಲನೆ

ನವದೆಹಲಿ: ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಸ್ಮರಣಾರ್ಥ ನಿರ್ಮಿಸಿರುವ ಈ ಪ್ರತಿಮೆಯನ್ನು ನೋಡಲು ಬರುವವರಿಗೆ ದೇಶದ ವಿವಿಧ ಭಾಗಗಳಿಂದ ರೈಲ್ವೆ ಸಂಪರ್ಕ ದೊರೆಯಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ದೇಶದ ವಿವಿಧ ಭಾಗಗಳಿಂದ ಏಕತಾ ಪ್ರತಿಮೆ ಇರುವ ಗುಜರಾತ್ ನ ಕೆವಡಿಯಾಗೆ ಸಂಚರಿಸುವ ಎಂಟು ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವಿಡಿಯೊ ಕಾನ್ಫರೆನ್ಸ್ ಮುಖಾಂತರ ಚಾಲನೆ ನೀಡಲಿದ್ದಾರೆ.

ಕೆವಡಿಯಾ ರೈಲು ನಿಲ್ದಾಣವು ಹಸಿರು ಕಟ್ಟಡ ಪ್ರಮಾಣ ಪತ್ರ ಪಡೆದ ದೇಶದ ಮೊದಲ ರೈಲು ನಿಲ್ದಾಣವಾಗಿದೆ. ಈ ಪೈಕಿ ಒಂದು ರೈಲು ಜನ ಶತಾಬ್ಧಿ ಎಕ್ಸ್ ಪ್ರೆಸ್ ಆಗಿದ್ದು, ಇದು ಅಹಮದಾಬಾದ್ ನಿಂದ ಕೆವಡಿಯಾಗೆ ಸಂಚರಿಸದೆ. ಈ ರೈಲಿನಲ್ಲಿ ಅತ್ಯಾಧುನಿಕ ವಿಸ್ಟಾಡೋಮ್ ಬೋಗಿಗಳು ಇರಲಿವೆ ಎಂದು ಹೇಳಿರುವ ಅವರು, ಕೆಲ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

17/01/2021 07:52 am

Cinque Terre

60.19 K

Cinque Terre

1

ಸಂಬಂಧಿತ ಸುದ್ದಿ