ಬೆಂಗಳೂರು: ಸರ್ಕಾರದ ಲಿಖಿತ ಭರವಸೆ ಕೊಟ್ಟ ನಂತರವಷ್ಟೇ ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದ ಸಾರಿಗೆ ನೌಕರರು ಇದೀಗ ಮತ್ತೊಮ್ಮೆ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ತಮ್ಮ ಬೇಡಿಕೆ ಈಡೇರದ ಕಾರಣ ಕೆಎಸ್ಆರ್ ಟಿಸಿ ಸೇರಿದಂತೆ ಎಲ್ಲ ಸಾರಿಗೆ ನಿಗಮದ ನೌಕರರು ಬುಧವಾರ ಮತ್ತೆ ಮುಷ್ಕರ ಆರಂಭಿಸಲಿದ್ದಾರೆ.
ಕಳೆದ ಬಾರಿ ನಡೆಸಿದ ಮುಷ್ಕರದ ವೇಳೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದನ್ನು ಬಿಟ್ಟು ಉಳಿದೆಲ್ಲಾ ಬೇಡಿಕೆ ಈಡೇರಿಸುತ್ತೇವೆ ಎಂದು ಸ್ವತಃ ಸಾರಿಗೆ ಸಚಿವ ಲಕ್ಷ್ಮಣ ಸವದಿ ಲಿಖಿತ ಭರವಸೆ ನೀಡಿದ್ದರು. ಆದರೆ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಈ ಕೂಡಲೇ ಸರ್ಕಾರ ಲಿಖಿತ ಭರವಸೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ ಈ ಮೊದಲು ನಡೆಸಿದ ಹೋರಾಟಕ್ಕಿಂತ ನಾಳೆ ಫೆ.೧೦ರಿಂದ ತೀವ್ರ ಸ್ವರೂಪದ ಹೋರಾಟ ರೂಪಿಸಬೇಕಾಗುತ್ತದೆ ಎಂದು ಸಾರಿಗೆ ನೌಕರರು ಸರ್ಕಾರವನ್ನು ಆಗ್ರಹಿಸಿದ್ದಾರೆ.
PublicNext
09/02/2021 07:43 am