ಚೆನ್ನೈ: ನವದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ಎಲ್‌ಪಿಜಿ ಸಿಲಿಂಡರ್ ಮತ್ತು ಪೆಟ್ರೋಲ್ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ ಕೆಲ ತಿಂಗಳಿನಿಂದ ಎಲ್‌ಪಿಜಿ ಗ್ಯಾಸ್ ಮತ್ತು ಪೆಟ್ರೋಲ್ ದರ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರಿಗೆ ಹೊರೆಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡಿನ ಚೆನ್ನೈನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು-ವರರ ಸ್ನೇಹಿತರ ತಂಡವು ಎಲ್‌ಪಿಜಿ ಸಿಲಿಂಡರ್ ಮತ್ತು ಒಂದು ಕ್ಯಾನ್ ಪೆಟ್ರೋಲ್ ಉಡುಗೊರೆಯಾಗಿ ನೀಡಿದ್ದಾರೆ. ಈ ವಿಡಿಯೋಗೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು, ಇದು ಯೋಗ್ಯವಾದ ಉಡುಗೊರೆ ಎಂದು ಹೇಳಿದ್ದಾರೆ.
PublicNext
21/02/2021 05:41 pm